ವೈಯಕ್ತಿಕವಾಗಿ ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ ನಿಲ್ಲುತ್ತೇನೆ: ಲಕ್ಷ್ಮೀ ಹೆಬ್ಬಾಳ್ಕರ್‌

0
Spread the love

ಬೆಂಗಳೂರು: ವೈಯಕ್ತಿಕವಾಗಿ ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ ನಿಲ್ಲುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಭರವಸೆ ನೀಡಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಚಿವರು ಭೇಟಿ ನೀಡಿ, ಮನವಿ ಸ್ವೀಕರಿಸಿದರು.

Advertisement

ಈ ವೇಳೆ ಮಾತನಾಡಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಸಲು ಸರ್ಕಾರಕ್ಕೆ ಸಹಾನುಭೂತಿ ಇದೆ.  ವೈಯಕ್ತಿಕವಾಗಿ ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಪರ ನಿಲ್ಲುತ್ತೇನೆ ಎಂದು ಅವರು ಭರವಸೆ ನೀಡಿದರು.

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನವನ್ನು ಬಜೆಟ್ನಲ್ಲಿ ಹೆಚ್ಚಿಸಲಾಗಿದೆ. 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ  ಆಗಿದ್ದಾಗಲೇ ವೇತನ ಹೆಚ್ಚಿಸಲಾಗಿತ್ತು. ಈಗಲೂ  ಸಿದ್ದರಾಮಯ್ಯನನವರೇ  ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು ಹೆಚ್ಚಿಸಿದ್ದು, ಮುಂದಿನ ದಿನಗಳಲ್ಲಿ ಮತ್ತೆ ಗೌರವಧನ ಏರಿಕೆಯಾಗುವ ವಿಶ್ವಾಸವಿದೆ ಎಂದು ಸಚಿವರು ಹೇಳಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ದಿನವಾದ ನಾಳೆ (ಮಾರ್ಚ್ 8) ಸಾಮೂಹಿಕವಾಗಿ ಗ್ರ್ಯಾಚುಯಿಟಿ ವಿತರಿಸಲಾಗುವುದು ಎಂದು ಹೇಳಿದ ಸಚಿವರು, ನಿವೃತ್ತಿಯಾದವರಿಗೆ ಇಡಿಗಂಟು ಹಣ ನೀಡುವುದರ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದರು.

ರಾಜ್ಯದಲ್ಲಿ 17 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸುವ ಯೋಚನೆಯಿದೆ.  ಈ ಮೂಲಕ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ  ಸಹಾಯವಾಗಲಿದೆ. ಈ ಬಗ್ಗೆ  ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಪ್ರಚಾರ ಕೈಗೊಳ್ಳಬೇಕಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.


Spread the love

LEAVE A REPLY

Please enter your comment!
Please enter your name here