ವಿಜಯಪುರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

0
Spread the love

ವಿಜಯಪುರ: ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಅಂದಾಜು 35 ವರ್ಷದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು,

Advertisement

ಸ್ಥಳಕ್ಕೆ ಆಲಮೇಲ‌ ಠಾಣೆಯ ಪಿಎಸ್ಐ ಅರವಿಂದ ಅಂಗಡಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯೋ ಆತ್ಮಹತ್ಯೆಯೋ ಎಂಬ ವಿಚಾರವಾಗಿ ತನಿಖೆ‌ ನಡೆಸಲು ಮುಂದಾಗಿದ್ದು, ಮೃತ ಪಟ್ಟ ವ್ಯಕ್ತಿಯ ಮಾಹಿತಿ ಬಗ್ಗೆ ಪೊಲೀಸರು ಕಲೆ ಹಾಕುತ್ತಿದ್ದಾರೆ. ಆಲಮೇಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here