HomeCrime NewsCrime News: ರೌಡಿಶೀಟರ್‌ ಜಯರಾಮ್‌ ಕೊಲೆ ಪ್ರಕರಣ: ಐವರು ಅರೆಸ್ಟ್!

Crime News: ರೌಡಿಶೀಟರ್‌ ಜಯರಾಮ್‌ ಕೊಲೆ ಪ್ರಕರಣ: ಐವರು ಅರೆಸ್ಟ್!

For Dai;y Updates Join Our whatsapp Group

Spread the love

ಬೆಂಗಳೂರು: ಇತ್ತೀಚೆಗೆ ಹೆಸರಘಟ್ಟ ಮುಖ್ಯರಸ್ತೆಯ ಕೊಡಗಿ ತಿರುಮಲಪುರದ ಬಾರ್‌ನಲ್ಲಿ ನಡೆದಿದ್ದ ರೌಡಿಶೀಟರ್‌ 40 ವರ್ಷದ ಜಯರಾಮ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಸೋಲದೇವನಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಮುನಿರಾಜು, ರಾಜೇಶ್‌ ಅಲಿಯಾಸ್‌ ಬಬ್ಲಿ, ಯತೀಶ್‌ ಗೌಡ ಹಾಗೂ ವಿನಯ್‌, ಉದಯ್ ಎಂದು ಗುರುತಿಸಲಾಗಿದೆ. ಮಾರ್ಚ್‌ 4ರ ರಾತ್ರಿ ಸುಮಾರು 8.30ರ ಸುಮಾರಿಗೆ ಬಾರ್‌ನಲ್ಲಿ ಮದ್ಯ ಸೇವಿಸುತ್ತಿದ್ದ ಜಯರಾಮ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ಈ ಸಂಬಂಧ ಜಯರಾಮ್‌ ಕುಟುಂಬಸ್ಥರು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಆರೋಪಿಗಳ ಬಂಧನಕ್ಕೆ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಮೊಬೈಲ್‌ ಲೊಕೇಷನ್‌ ಆಧರಿಸಿ ಪತ್ತೆಹಚ್ಚಿ ಬಂಧಿಸಲಾಯಿತು.

ಯಲಹಂಕ ನ್ಯೂ ಟೌನ್‌ ಪೊಲೀಸ್ ಠಾಣೆಯ ರೌಡಿ ಶೀಟರ್‌ ಆಗಿದ್ದ ಜಯರಾಮ್‌, 2018ನೇ ಸಾಲಿನಲ್ಲಿ ನಡೆದಿದ್ದ ಯಲಹಂಕದ ಕಿರಣ್‌ ಎಂಬಾತನ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಜೈಲು ಸೇರಿದ್ದ. ನಂತರ, ಜಾಮೀನು ಪಡೆದು ಜೈಲಿನಿಂದ ಬಿಡುಗಡೆ ಆಗಿದ್ದ. ಚಿಕ್ಕಬೊಮ್ಮಸಂದ್ರದಲ್ಲಿ ಕೋಳಿ ಅಂಗಡಿ ಇಟ್ಟುಕೊಂಡಿದ್ದ ಎಂದು ಮೂಲಗಳು ತಿಳಿಸಿವೆ.

‘ಫೆಬ್ರುವರಿಯಲ್ಲಿ ಮುನಿರಾಜ್‌ ಹಾಗೂ ಜಯರಾಮ್‌ ಮಧ್ಯೆ ಗಲಾಟೆ ನಡೆದಿತ್ತು. ಇಬ್ಬರ ಮಧ್ಯೆ ದ್ವೇಷ ಮೂಡಿತ್ತು. ಜಯರಾಮ್‌ ಮೇಲೆ ಸೇಡು ತೀರಿಸಿಕೊಳ್ಳಲು ಮುನಿರಾಜ್‌ ಕಡೆಯವರು ಕೊಲೆಗೆ ಸಂಚು ರೂಪಿಸಿದ್ದರು. ಮಾರ್ಚ್‌ 4ರಂದು ಬಾರ್‌ನಲ್ಲಿ ಮದ್ಯ ಸೇವಿಸುತ್ತಾ ಕುಳಿತಿದ್ದ ಮಾಹಿತಿ ತಿಳಿದು ಸ್ಥಳಕ್ಕೆ ಬಂದು ಕೊಲೆ ಮಾಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇದೀಗ ಐವರನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!