Rain Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ ಸಾಧ್ಯತೆ!

0
Spread the love

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Advertisement

ರಾಜ್ಯದಾದ್ಯಂತ ತಾಪಮಾನ ಹೆಚ್ಚುತ್ತಿರುವ ಸಂದರ್ಭದಲ್ಲೇ ಐಎಂಡಿ ಈ ಮುನ್ಸೂಚನೆ ನೀಡಿದೆ. ಮಾರ್ಚ್ 11 ರಿಂದ 13 ರವರೆಗೆ ಬೆಂಗಳೂರು ನಗರ ಸೇರಿದಂತೆ 12 ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಮತ್ತು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದರೆ, ರಾಜ್ಯದ ಇತರ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

ಮಾರ್ಚ್ 11 ರಂದು ಬೆಂಗಳೂರು ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34 ಮತ್ತು 20 ಡಿಗ್ರಿ ಸೆಲ್ಶಿಯಸ್ ಆಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here