ಕೊಪ್ಪಳ:- ಇಲ್ಲಿ ನಡೆದಿದ್ದ ವಿದೇಶಿ ಮಹಿಳೆ ಹಾಗೂ ಹೋಮ್‌ಸ್ಟೇ ಮಾಲಿಕಳ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿಯನ್ನು ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
27 ವರ್ಷದ ಶರಣಬಸವ ಬಂಧಿತ ಆರೋಪಿ. ಗಾರೆ ಕೆಲಸ ಮಾಡಿಕೊಂಡಿದ್ದ ಶರಣಬಸವ ಘಟನೆ ನಂತರ ತಲೆಮರೆಸಿಕೊಂಡಿದ್ದ. ಆರೋಪಿ ತಮಿಳುನಾಡಿನ ಚೆನ್ನೈನಲ್ಲಿದ್ದ. ನಿನ್ನೆಯೇ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಂದು ಮುಂಜಾನೆ ಆರೋಪಿಯನ್ನು ಗಂಗಾವತಿಗೆ ಕರೆದುಕೊಂಡು ಬಂದಿದ್ದಾರೆ. ಇನ್ನೂ ಕೃತ್ಯವೆಸಗಿದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಘಟನೆ ಹಿನ್ನೆಲೆ:-
ಕೊಪ್ಪಳದ ಕಾಲುವೆಯ ಪ್ರಶಾಂತ ದಡದಲ್ಲಿ ದೇಶಿ ಮತ್ತು ವಿದೇಶಿ ಪ್ರವಾಸಿಗರು ನಕ್ಷತ್ರಗಳನ್ನು ವೀಕ್ಷಿಸುತ್ತಿದ್ದಾಗ ಕೆಲ ದುಷ್ಕರ್ಮಿಗಳು ದಾಂಧಲೆ ಸೃಷ್ಟಿಸಿದ್ದರು. ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದರು.



