ಬೆಳಗಾವಿ: ಕೆಎಸ್‌ಆರ್‌ಟಿಸಿ ಬಸ್ ವೊಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತಗ್ಗು ಗುಂಡಿಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಲಿಂಗದಳ್ಳಿ-ಅರವಳ್ಳಿ ಬಳಿ ನಡೆದಿದೆ. ಅದೃಷ್ಟವಶಾತ್ ಇಪ್ಪತ್ತಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು,
Advertisement
ಬಸ್ ನ ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ಕಿಟಕಿಯಿಂದ ಹೊರ ಬಂದಿದ್ದಾರೆ.
ಹದಿನೈದಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.