ಭರವಸೆಯ ಬೆಳಕಾದ ಬಜೆಟ್

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಿಎಂ ಸಿದ್ದರಾಮಯ್ಯನವರು ಸದನದಲ್ಲಿ ಮಂಡಿಸಿದ ಬಜೆಟ್ ಭರವಸೆಯ ಬೆಳಕನ್ನು ಚೆಲ್ಲಿದೆ ಎಂದು ಗದಗ-ಬೆಟಗೇರಿ ನಗರಸಭೆಯ ಸದಸ್ಯ ಜನಾಬ್ ಬರಕತ್ ಅಲಿ ಮುಲ್ಲಾ ಸಂತಸ ವ್ಯಕ್ತಪಡಿಸಿದ್ದಾರೆ.

Advertisement

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಮಾನ್ಯತೆ ನೀಡಿದ್ದು, ಸವದತ್ತಿ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗಾಗಿ 250 ಕೋಟಿ ಅನುದಾನ, ಜಿಲ್ಲೆಯ ಡಂಬಳ ಗ್ರಾಮದಲ್ಲಿ ತೋಟಗಾರಿಕೆ ಮಹಾವಿದ್ಯಾಲಯದ ಪ್ರಸ್ತಾಪ, ಐತಿಹಾಸಿಕ ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆಗೊಳಿಸಿ 250 ಕೋಟಿ ವಿಶೇಷ ಅನುದಾನ, ಮಹಿಳೆಯರ ಉನ್ನತಿಗಾಗಿ ಧನ ಸಹಾಯ, ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ವಿ.ವಿ ಸ್ಥಾಪನೆ, 500 ಪಬ್ಲಿಕ್ ಶಾಲೆಗಳ ಸ್ಥಾಪನೆ, 2 ಸಾವಿರ ಉಪನ್ಯಾಸಕರ ನೇಮಕಾತಿಗೆ ಘೋಷಣೆ ಮುಂತಾದವರು ಜನಪರ ಯೋಜನೆಗಳಾಗಿವೆ ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here