ನಟಿ ಕಂಗನಾ ಟ್ವೀಟರ್ ಖಾತೆ ಅಮಾನತು!

Vijayasakshi (Gadag News) :

ವಿಜಯಸಾಕ್ಷಿ ಸುದ್ದಿ, ನವದೆಹಲಿ

ನಟಿ ಕಂಗನಾ ರಣಾವತ್ ಹಲವು ವಿಷಯಗಳ ಕುರಿತು ವಿವಾದಾತ್ಮಕ ಟ್ವೀಟ್‌ ಗಳನ್ನು ಮಾಡುತ್ತಿರುವ ಹಿನ್ನೆಲೆಯಲ್ಲಿ ಅವರ ಟ್ವೀಟ್ ಖಾತೆಯನ್ನು ಅಮಾನತು ಮಾಡಲಾಗಿದೆ. ಇತ್ತೀಚೆಗೆ ನಟ ಸೋನು ಸೂದ್ ಅವರ ಕುರಿತು ಟ್ವೀಟ್ ಮಾಡಿ ನಟಿ ರಣಾವತ್ ಅಣುಕಿಸಿದ್ದರು.

ಮೈಕ್ರೋ ಬ್ಲಾಗಿಂಗ್ ಸೈಟ್ ನಿಯಮಗಳಿಗೆ ವಿರುದ್ಧವಾಗಿ ಪದಗಳನ್ನು ಬಳಸುತ್ತಿದ್ದರು. ಈ ಎಲ್ಲ ಅಂಶಗಳನ್ನು ಪರಿಗಣಿಸಿದ ಟ್ವಿಟರ್, ಅವರ ಖಾತೆಯನ್ನು ಶಾಶ್ವತವಾಗಿ ಅಮಾನತು ಮಾಡುವ ಕಠಿಣ ಕ್ರಮ ಕೈಗೊಂಡಿದೆ. ಈ ಕುರಿತು ಟ್ವೀಟರ್ ವಕ್ತಾರರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದ ಚುನಾವಣಾ ಸಂದರ್ಭದಲ್ಲಿಯೂ ಸಿಎಂ ಮಮತಾ ಬ್ಯಾನರ್ಜಿ ಅವರ ಕುರಿತು ಕಂಗನಾ ಮನಸೋ ಇಚ್ಛೆ ಸರಣಿ ಟ್ವೀಟ್ ಮಾಡಿದ್ದರು. ಚುನಾವಣಾ ಫಲಿತಾಂಶದ ನಂತರವೂ ಮಮತಾ ಬ್ಯಾನರ್ಜಿ ಅವರನ್ನು ಟೀಕಿಸಿದ್ದರು. ‘ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ಗೆದ್ದ ಬಳಿಕ ಹಿಂಸಾಚಾರ ಜಾಸ್ತಿ ಆಗಿದೆ. ಅಧ್ಯಕ್ಷೀಯ ಆಡಳಿತ ತರಬೇಕು’ ಎಂದು ಕಂಗನಾ ಟ್ವೀಟ್ ಮಾಡಿದ್ದರು. ಈ ಎಲ್ಲ ಅಂಶಗಳನ್ನು ಗಮನಿಸಿರುವ ಟ್ವೀಟರ್ ಸಂಸ್ಥೆ ಈ ನಿರ್ಧಾರ ಕೈಗೊಂಡಿದೆ.

ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTube ಅನುಸರಿಸಿ.

Leave A Reply

Your email address will not be published.