ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಹಗರಣದ ತನಿಖೆಯ ನೆಪದಲ್ಲಿ ಸಿಐಡಿ ಪೊಲೀಸರು ನೀಡಿದ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಮಾಡಿಕೊಂಡಿದ್ದ ವಕೀಲೆ ಎಸ್ ಜೀವಾ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಕನಕಲಕ್ಷ್ಮೀ ಬಂಧನವಾಗಿದೆ.
Advertisement
  
ಎಸ್ ಐಟಿ ಅಧಿಕಾರಿಗಳು ಕನಕಲಕ್ಷ್ಮಿ ಅವರನ್ನು ಬಂಧಿಸಿದ್ದು, ಕರ್ನಾಟಕ ಭೋವಿ ನಿಗಮ ಹಗರಣದ ತನಿಖೆ ಎದುರಿಸಿದಾಗ ಪೊಲೀಸ್ ಅಧಿಕಾರಿ ವಿವಸ್ತ್ರಗೊಳಿಸಿ ವಿಚಾರಣೆ ನಡೆಸಿದ್ದಲ್ಲದೆ,
25 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು ಎಂದು ಮಹಿಳಾ ವಕೀಲೆ ಜೀವಾ 13 ಪುಟಗಳ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಸಿಐಡಿ ಡಿವೈಎಸ್ ಪಿ ಕನಕಲಕ್ಷ್ಮಿ ವಿರುದ್ಧ ಜೀವಾ ಸಹೋದರಿ ದೂರು ನೀಡಿದ್ದರು.


