ಬೆಂಗಳೂರು: ಮನೆಗಳವು ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ವರ್ತೂರ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೀಗ ಹಾಕಿದ್ದ ಮನೆಗಳ್ಳನ್ನ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದನು.
ವರ್ತೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನ ಮಾಡಿರುವ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಎಂಟು ಲಕ್ಷ ಮೌಲ್ಯದ 106 ಗ್ರಾ ಚಿನ್ನ ವಶಕ್ಕೆ ಪಡೆದಿದ್ದು, ವರ್ತೂರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.



