ಕೋಲಾರ:- ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಗುಂಟಪಲ್ಲಿ ಕ್ರಾಸ್ ಬಳಿ ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ ಸಂಭವಿಸಿದೆ.
ಘಟನೆ ಪರಿಣಾಮ ಬಸ್ನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಜರುಗಿದೆ. ಗಂಗಾಧರ್ ಮೃತ ಪ್ರಯಾಣಿಕ. ಇವರು ಆಂದ್ರಪ್ರದೇಶ ಮೂಲದ ಮದನಪಲ್ಲಿಯ ಮೂಲದವರು ಎನ್ನಲಾಗಿದೆ. ವೇಗವಾಗಿದ್ದ ಖಾಸಗಿ ಬಸ್ ಓವರ್ ಟೆಕ್ ಮಾಡಲು ಹೋಗಿ ಈ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಆಂದ್ರಪ್ರದೇಶದ ಮದನಪಲ್ಲಿ ಹಾಗೂ ಕೋಲಾರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ರಾಯಲ್ಪಾಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



