ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಬಿಗ್ ಬಾಸ್ 11ರ ಸ್ಪರ್ಧಿಗಳು!

0
Spread the love

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬಿಗ್ ಬಾಸ್ ಕನ್ನಡ 11’ರ ಸ್ಪರ್ಧಿಗಳಾಗಿದ್ದ ಐಶ್ವರ್ಯಾ, ಶಿಶಿರ್ ಶಾಸ್ತ್ರಿ, ಮೋಕ್ಷಿತಾ ಪೈ ಭೇಟಿ ನೀಡಿದ್ದಾರೆ. ಈ ವೇಳೆ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

Advertisement

ಬಿಗ್ ಬಾಸ್ ಬಳಿಕ ಹಲವು ಕಾರ್ಯಕ್ರಮಗಳಲ್ಲಿ ಬ್ಯುಸಿಯಿದ್ದ ಸ್ಪರ್ಧಿಗಳು ಇದೀಗ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ, ಮೋಕ್ಷಿತಾ, ಶಿಶಿರ್, ಐಶ್ವರ್ಯಾ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.

ಇತ್ತೀಚೆಗೆ ಕೊಡಗಿನಲ್ಲಿ ‘ಬಿಗ್ ಬಾಸ್’ ಸ್ಪರ್ಧಿ ರಂಜಿತ್ ಅವರ ಎಂಗೇಜ್‌ಮೆಂಟ್ ಅದ್ಧೂರಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ ಐಶ್ವರ್ಯಾ, ಮೋಕ್ಷಿತಾ, ಶಿಶಿರ್, ಭವ್ಯಾ ಗೌಡ, ಅನುಷಾ ರೈ ಭಾಗಿಯಾಗಿ ಶುಭಕೋರಿದ್ದರು.

ಬಿಗ್ ಬಾಸ್ ಸೋ ಮುಗಿದ ಬಳಿಕ ಸ್ಪರ್ಧಿಗಳು ಒಂದಲ್ಲ ಒಂದು ಕಾರ್ಯಕ್ರಮದಲ್ಲಿ ಬ್ಯೂಸಿ ಆಗಿದ್ದಾರೆ.


Spread the love

LEAVE A REPLY

Please enter your comment!
Please enter your name here