ಚಿಕ್ಕಮಗಳೂರು : ಕಾಫಿನಾಡಲ್ಲಿ ಮೊದಲ ಮಳೆಗೆ ಭಾರೀ ಅವಾಂತರ ಸೃಷ್ಟಿಯಾಗಿದ್ದು, ಕಾರಿನ ಮೇಲೆ ಮರ ಬಿದ್ದ ಪರಿಣಾಮ ಕಾರಿನ ಗ್ಲಾಸ್ ಪುಡಿ ಪುಡಿಯಾಗಿದೆ.
Advertisement
ಕಳಸ ತಾಲೂಕಿನ ಹಿರೇಬೈಲ್ ಗ್ರಾಮದ ಬಳಿ ಕಾರಿನ ಮೇಲೆ ಮರ ಬಿದ್ದಿದೆ. ಕಳಸದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದೆ. ಅದೃಷ್ಠವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮರ ಬಿದ್ದ ಪರಿಣಾಮ ಕಾರಿನ ಇಂದಿನ ಗ್ಲಾಸ್ ಸಂಪೂರ್ಣ ಪುಡಿ—ಪುಡಿಯಾಗಿದೆ. ಸ್ಥಳಕ್ಕೆ ಕಳಸ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ಈ ಘಟನೆ ನಡೆದಿದೆ.