ಕಲಬುರಗಿ:- ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ನಗರದ ಖಾದ್ರಿ ಚೌಕ್ ಬಳಿ ಜರುಗಿದೆ.
ನಬಿ ಕಾಲೋನಿ ನಿವಾಸಿಯಾದ 28 ವರ್ಷದ ಇಮ್ರಾನ್ ಸೈಯದ್ ಹತ್ಯೆಯಾದ ವ್ಯಕ್ತಿ. ಮನೆಗೆ ತೆರಳುವಾಗ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು, ಮಾರಕಾಸ್ತ್ರದಿಂದ ಕೊಚ್ಚಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ.
ಹಳೆ ವೈಷಮ್ಯದ ಹಿನ್ನಲೆಯಲ್ಲಿ ಹತ್ಯೆ ಮಾಡಿರೋ ಶಂಕೆ ವ್ಯಕ್ತವಾಗಿದ್ದು, ಘಟನೆ ಸಂಬಂಧ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರಿಂದ ತನಿಖೆ ಚುರುಕುಗೊಂಡಿದೆ.



