ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನ, ಬೆಳ್ಳಿ ಬೆಲೆಗಳು ಮತ್ತೆ ಏರಿಕೆ ಆಗಿದೆ.
ಜಾಗತಿಕವಾಗಿ ಆರ್ಥಿಕ ಹಿನ್ನಡೆ ಮತ್ತು ರಾಜಕೀಯ ಸೂಕ್ಷ್ಮ ಪರಿಸ್ಥಿತಿ ಹೆಚ್ಚಿದಂತೆ ಚಿನ್ನ, ಬೆಳ್ಳಿಯಂತಹ ವಸ್ತುಗಳಿಗೆ ಬೇಡಿಕೆ ಸಹಜವಾಗಿ ಹೆಚ್ಚುತ್ತದೆ. ಈಗಲೂ ಕೂಡ ಅದೇ ಆಗುತ್ತಿದ್ದು, ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ಮುಂದುವರಿದಿದೆ. ನಿನ್ನೆ 45 ರೂನಷ್ಟು ಏರಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು 55 ರೂ ಹೆಚ್ಚಳವಾಗಿದೆ. ಎರಡು ದಿನದಲ್ಲಿ ಒಂದು ಗ್ರಾಮ್ಗೆ 100 ರೂ ಏರಿಕೆ ಆದಂತಾಗಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 81,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 88,580 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 81,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,100 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ:-
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 81,200 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 88,580 ರೂ.
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,440 ರೂ.
ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ:-
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 81,200 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 88,580 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ