ಕೋಲಾರ:- ಕಾರ್ಮಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಕೋಲಾರದ ಸಿಇಎನ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
Advertisement
ಬಂಧಿತ ಆರೋಪಿಯನ್ನು ಸೈಯದ್ ಪುರ್ಖಾನ್ ಎಂದು ಗುರುತಿಸಲಾಗಿದೆ. ಬಂಧಿತನಿಂದ 50 ಲಕ್ಷ ರುಪಾಯಿ ಬೆಲೆ ಬಾಳುವ 806 ಗ್ರಾಂ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಕೆಟಿಎಂ ಡ್ಯೂಕ್ ಬೈಕ್ ನ್ನ ಪೊಲೀಸರು ಸೀಜ್ ಮಾಡಿದ್ದಾರೆ. ಆರೋಪಿಯು, ನೈಜೀರಿಯಾ, ಇತರೆ ದೇಶಗಳಿಂದ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿಸಿ ಕೋಲಾರದ ಕೈಗಾರಿಕಾ ಪ್ರದೇಶದ ಕಾರ್ಮಿಕರಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಕೋಲಾರದ ಮಡೇರಹಳ್ಳಿ ಬಳಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಈ ಸಂಬಂಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.