ಅಂಗನವಾಡಿ ಕಾರ್ಯಕರ್ತರ ಗೌರವ ಧನ ಹೆಚ್ಚಳಕ್ಕೆ ಕ್ರಮ: ಹೆಬ್ಬಾಳ್ಕರ್!

0
Spread the love

ಬೆಂಗಳೂರು:- ಅಂಗನವಾಡಿ ಕಾರ್ಯಕರ್ತರ ಗೌರವ ಧನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Advertisement

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಪ್ರಶ್ನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಉತ್ತರಿಸಿದರು. ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಬದ್ಧತೆ ಇದ್ದು, ಈ ಬಾರಿಯ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಿಸುವ ಮೂಲಕ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯನ್ನು ಈಡೇರಿಸಲಾಗಿದೆ ಎಂದರು.

ಇತ್ತೀಚಿನ ಮಂಡಿಸಲಾದ 2025-26ನೇ ಸಾಲಿನ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಸಾವಿರ ರೂ. ಹಾಗೂ ಅಂಗನವಾಡಿ ಸಹಾಯಕಿಯರಿಗೆ 750 ರೂ. ಹೆಚ್ಚಿಸಲಾಗಿದ್ದು, ಇದರಿಂದ ವರ್ಷಕ್ಕೆ ಇಲಾಖೆಗೆ 144 ಕೋಟಿ ರೂ. ಅನುದಾನ ಹೊರೆಯಾಗಿದೆ ಎಂದರು.

ಅಂಗನವಾಡಿ ಕಾರ್ಯಕರ್ತೆಯವರ ಗೌರವ ಧನವನ್ನು ಹೆಚ್ಚಳ ಮಾಡಿರುವುದು ನಮ್ಮ ಕಾಂಗ್ರೆಸ್‌ ಸರ್ಕಾರವೇ. 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದ ವೇಳೆಯ 2 ಸಾವಿರ ರೂಪಾಯಿ ಗೌರವ ಧನವನ್ನು ಹೆಚ್ಚಿಸಲಾಗಿತ್ತು. ಆದರೆ ,ಕಳೆದ ಬಿಜೆಪಿ ಸರ್ಕಾರದ ನಾಲ್ಕು ವರ್ಷಗಳ ಅವಧಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನವನ್ನು ಒಂದು ರೂಪಾಯಿ ಹೆಚ್ಚಿಸಿರಲಿಲ್ಲ ಎಂದು ಸದನಕ್ಕೆ ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿರುವ ರಾಜ್ಯಗಳ ಪೈಕಿ ಇಡೀ ದೇಶದಲ್ಲೇ ನಮ್ಮ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ನಮ್ಮ ಸರ್ಕಾರಕ್ಕೆ ಅಂಗನವಾಡಿ ಸಹಾಯಕರು ಹಾಗೂ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಹಾಗಾಗಿಯೇ ಅವರ ಗೌರವ ಧನ ಹೆಚ್ಚಳ ಮಾಡಲು ಸರ್ಕಾರ ಮತ್ತು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ಸಚಿವರು ಸದನಕ್ಕೆ ತಿಳಿಸಿದರು.


Spread the love

LEAVE A REPLY

Please enter your comment!
Please enter your name here