ಮೂಲ ಸೌಕರ್ಯಗಳ ಕೊರತೆ: ಕೊಡಗಿನ 21 ಸರ್ಕಾರಿ ಶಾಲೆಗಳಿಗೆ ಬೀಗ!

0
Spread the love

ಮಡಿಕೇರಿ:- ಕೊಡಗು ಜಿಲ್ಲೆಯಲ್ಲಿ ಶೂನ್ಯ ದಾಖಲಾತಿ ಹೊಂದಿದ್ದ 21 ಸರ್ಕಾರಿ ಶಾಲೆಗಳಿಗೆ ಬೀಗ ಬಿದ್ದಿದೆ.

Advertisement

ಜಿಲ್ಲೆಯಲ್ಲಿ 2019 ರಿಂದ 2024ರ ವರೆಗಿನ ಅವಧಿಯಲ್ಲಿ ಒಟ್ಟು 21 ಸರ್ಕಾರಿ ಶಾಲೆಗಳಿಗೆ ಬೀಗ ಬಿದ್ದಿದೆ. ಮೂಲ ಸೌಕರ್ಯಗಳ ಕೊರತೆಯಿಂದಾಗಿ ಮಕ್ಕಳು ಶಾಲೆಗಳತ್ತ ಮುಖ ಮಾಡುತ್ತಿಲ್ಲ. ನಿರಂತರ ಮಕ್ಕಳ ಕೊರತೆಯಿಂದಾಗಿ ಮಡಿಕೇರಿ ತಾಲೂಕಿನಲ್ಲಿ 6, ಸೋಮವಾರಪೇಟೆ ತಾಲೂಕಿನಲ್ಲಿ 12 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 3 ಸರ್ಕಾರಿ ಶಾಲೆಗಳನ್ನ ಬಂದ್ ಮಾಡಲಾಗಿದೆ.

2019 ರಲ್ಲಿ 2, 2022 ರಲ್ಲಿ 9, 2023 ರಲ್ಲಿ 4 ಹಾಗೂ 2024 ರಲ್ಲಿ 6 ಶೂನ್ಯ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳಿಗೆ ಬೀಗ ಬಿದ್ದಿದೆ. ಈಗಾಗಲೇ ಮುಚ್ಚಲ್ಪಟ್ಟಿರುವ ಶಾಲೆಗಳಲ್ಲಿ ವಿದ್ಯಾರ್ಥಿಗಳು ದಾಖಲಾದರೆ ಶಾಲೆಗಳನ್ನು ತೆರೆಯಲಾಗುವುದೆಂದು ಶಿಕ್ಷಣ ಇಲಾಖೆ ಹೇಳುತ್ತಿದೆ.


Spread the love

LEAVE A REPLY

Please enter your comment!
Please enter your name here