ಗುಣಮಟ್ಟದ ಕಾನೂನು ಶಿಕ್ಷಣ ಅಗತ್ಯ: ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಇಂತಹ ಗುಣವನ್ನು ಕೆ.ಎಚ್. ಪಾಟೀಲ ಅವರು ಹೊಂದಿದ್ದು, ಬೆಂಗಳೂರಿನ `ಕೆ.ಎಚ್.ಪಾಟೀಲ್ ಸ್ಕೂಲ್ ಆಫ್ ಲಾ’ ಉದ್ಘಾಟಿಸಲು ನನಗೆ ಸಂತೋಷ ಎನಿಸುತ್ತಿದೆ ಎಂದು ಸರ್ವೋಚ್ಛ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್. ವೆಂಕಟಾಚಲಯ್ಯ ಹೇಳಿದರು.

Advertisement

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶುಕ್ರವಾರ ಸಂಜೆ ಸಹಕಾರ ರಂಗದ ಭೀಷ್ಮ ಕೆ.ಎಚ್. ಪಾಟೀಲ ಅಭಿಮಾನಿ ಬಳಗ, ಬೆಂಗಳೂರು ನಗರದ ವಿವಿಧ ಸಹಕಾರ ಸಂಘಗಳು ಹಾಗೂ ಸಹಕಾರ ರಂಗದ ಭೀಷ್ಮ ಕೆ.ಎಚ್. ಪಾಟೀಲ ಮೆಮೋರಿಯಲ್ ಟ್ರಸ್ಟ್ ಬೆಂಗಳೂರು ಇವರು ಹಮ್ಮಿಕೊಂಡಿದ್ದ ಕೆ.ಎಚ್. ಪಾಟೀಲ ಜನ್ಮ ಶತಮಾನೋತ್ಸವ ಆಚರಣೆ ಮತ್ತು ಕೆ.ಎಚ್. ಪಾಟೀಲ ಸ್ಕೂಲ್ ಆಫ್ ಲಾ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಉದ್ಯೋಗ ಮತ್ತು ಸಂಪಾದನೆ ಯಾರು ಬೇಕಾದರೂ ಮಾಡಬಹುದು. ವಿದ್ಯಾರ್ಥಿಗಳು ಇದಕ್ಕಿಂತ ಮುಖ್ಯವಾಗಿ ಅತ್ಯುನ್ನತ ಧ್ಯೇಯಗಳೊಂದಿಗೆ ಗುಣಮಟ್ಟದ ಶಿಕ್ಷಣ ಹೊಂದಬೇಕೆAದರು.

ಮುಖ್ಯ ಅತಿಥಿಗಳಾಗಿ ಸಚಿವರಾದ ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ಶರಣಗೌಡ ಪಾಟೀಲ, ಎನ್.ಎಸ್. ಬೋಸರಾಜು, ಕೃಷ್ಣ ಬೈರೇಗೌಡ, 5ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಸಿ. ನಾರಾಯಣಸ್ವಾಮಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ತಿಮ್ಮಾಪುರ, ರುದ್ರಪ್ಪ ಲಮಾಣಿ, ಶಾಸಕ ರಿಜ್ವಾನ್ ಹರ್ಷದ್ ಸೇರಿದಂತೆ ರಾಜ್ಯದ ವಿವಿಧ ಕ್ಷೇತ್ರಗಳಿಂದ ಆಗಮಿಸಿದ ಹಲವಾರು ಶಾಸಕರು, ಸಹಕಾರಿ ಸಂಘಗಳ ಧುರೀಣರು, ಪಾಟೀಲರ ಅಭಿಮಾನಿಗಳು ಮತ್ತಿತರರು ಇದ್ದರು.

ಇದಕ್ಕೂ ಮುನ್ನ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ತಂಡದವರಿAದ ಕೆ.ಎಚ್.ಪಾಟೀಲ ಲಾವಣಿ ಪ್ರಸ್ತುತ ಪಡಿಸಿದರೆ, ರೇವತಿ ಕುಮಾರ್ ಪತ್ತಾರ್ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು. ಶಂಕರ್ ಪ್ರಕಾಶ್ ನಿರೂಪಿಸಿದರು.

ಮಾಜಿ ಮುಖ್ಯಮಂತ್ರಿ, ಕೇಂದ್ರದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಮಾಜಿ ಸಚಿವ ಎಂ. ವೀರಪ್ಪ ಮೊಯಿಲಿ ಲಾ ಶಾಲೆಯ ಲಾಂಛನ ಉದ್ಘಾಟಿಸಿದರು. ಇಂಧನ ಸಚಿವ ಕೆ.ಜೆ. ಜಾರ್ಜ್, ಮಾಜಿ ಸಚಿವ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ, ವಿ.ಪ ಸಭಾಪತಿ ಬಸವರಾಜ್ ಎಸ್.ಹೊರಟ್ಟಿ, ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್, ಅಧ್ಯಕ್ಷತೆ ವಹಿಸಿದ್ದ ಗೃಹಮಂತ್ರಿ ಡಾ. ಜಿ. ಪರಮೇಶ್ವರ್ ಮಾತನಾಡಿ, ಕೆ.ಎಚ್. ಪಾಟೀಲರನ್ನು ಸ್ಮರಿಸಿದರು.


Spread the love

LEAVE A REPLY

Please enter your comment!
Please enter your name here