ರಕ್ತದಾನ ಶ್ರೇಷ್ಠವಾದ ದಾನ

0
Spread the love

ವಿಜಯಸಾಕ್ಷಿ ಸುದ್ದಿ, ಮುಳಗುಂದ: ರಕ್ತದಾನವು ಶ್ರೇಷ್ಠವಾದ ದಾನವಾಗಿದೆ ಎಂದು ಕಾಲೇಜು ಉಪನ್ಯಾಸಕ, ರೆಡ್ ಕ್ರಾಸ್ ವಿಭಾಗದ ಸಂಯೋಜಕ ಬಸವರಾಜ ಹೂಗಾರ ಹೇಳಿದರು.

Advertisement

ಅವರು ಪಟ್ಟಣದ ಆರ್.ಎನ್. ದೇಶಪಾಂಡೆ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಹಾಗೂ ಏಡ್ಸ್ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯವಾಗಿದ್ದು, ಪ್ರತಿಯೊಬ್ಬರೂ ವರ್ಷಕ್ಕೊಮ್ಮೆಯಾದರೂ ರಕ್ತದಾನ ಮಾಡುವುದರಿಂದ ಒಂದು ಜೀವ ಉಳಿಸುವುದರ ಜೊತೆಯಲ್ಲಿ ಉತ್ತಮ ಆರೋಗ್ಯ ಹೊಂದಲು ಸಹಕಾರಿಯಾಗುತ್ತದೆ ಎಂದರು.

ಪ್ರಾಂಶುಪಾಲಕರಾದ ಡಾ. ಆರ್.ಎಂ. ಕಲ್ಲನಗೌಡ್ರ, ಅನುಪಮಾ, ಡಾ. ಪರಸಪ್ಪ ಬಾರಕೇರ, ಚಂದ್ರಕಾಂತ ತೋಟಿ, ವಿನಾಯಕ ಶಿರಬಡಗಿ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗಳು ಇದ್ದರು.


Spread the love

LEAVE A REPLY

Please enter your comment!
Please enter your name here