HomeKarnataka Newsಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಬೈಕ್‌ ಡಿಕ್ಕಿ: ಆಸ್ಪತ್ರೆಗೆ ದಾಖಲು, ಆರೋಗ್ಯ ವಿಚಾರಿಸಿದ ಸಿಎಂ!

ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಬೈಕ್‌ ಡಿಕ್ಕಿ: ಆಸ್ಪತ್ರೆಗೆ ದಾಖಲು, ಆರೋಗ್ಯ ವಿಚಾರಿಸಿದ ಸಿಎಂ!

For Dai;y Updates Join Our whatsapp Group

Spread the love

ದಾವಣಗೆರೆ:- ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಸ್ತೆ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಮಾನಪ್ಪ ಲಮಾಣಿ ಅವರು ಬೆಂಗಳೂರಿನಿಂದ ಕರ್ನಾಟಕ ವಿಧಾನ ಮಂಡಲ ಅಧಿವೇಶನ ಮುಗಿಸಿಕೊಂಡು ಹಾವೇರಿ ಜಿಲ್ಲೆಯ ಕುಮಾರಪಟ್ಟಣಂ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಬೈಕ್‌ ಬಂದು ಗುದ್ದಿದ ರಭಸಕ್ಕೆ ರುದ್ರಪ್ಪ ಮಾನಪ್ಪ ಲಮಾಣಿ ಅವರು ನೆಲಕ್ಕೆ ಬಿದ್ದ ಪರಿಣಾಮ ಅವರ ಹಣೆ, ಹಲ್ಲು ಹಾಗೂ ಬಲ ಮೊಣಕಾಲಿಗೆ ಪೆಟ್ಟು ಬಿದ್ದಿದೆ. ತಕ್ಷಣವೇ ಉಪ ಸಭಾಪತಿಗಳಿಗೆ ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ನಂತರ  ದಾವಣಗೆರೆ ಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗುದ್ದಿದ ಬೈಕ್ ಸವಾರ, ಬೈಕ್‌ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹಿರಿಯೂರು ಡಿವೈಎಸ್‌ಪಿ ಶಿವಕುಮಾರ್ ಹಾಗೂ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್‌ ಆನಂದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೈಕ್‌ ಸವಾರನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ರುದ್ರಪ್ಪ ಲಮಾಣಿ ಅವರ ಆರೋಗ್ಯ ವಿಚಾರಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!