ಮಂಡ್ಯ: ಡಿವೈಡರ್ ನ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಡ್ಯ ನಗರದ ಸ್ವರ್ಣಸಂದ್ರ ಬಳಿಯ ಬೆಂ-ಮೈ ಹೆದ್ದಾರಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಅರುಣ್ ಕುಮಾರ್ ಮೃತ ಯುವಕನಾಗಿದ್ದು,
Advertisement
ಮತ್ತೊರ್ವ ಜಯವೀರ್ ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ. ಹೊಸೂರಿನಿಂದ ಮೈಸೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಡಿವೈಡರ್’ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಗಾಯಾಳು ಜಯವೀರ್ ಮಂಡ್ಯ ಮಿಮ್ಸ್ ಚಿಕಿತ್ಸೆಗೆ ದಾಖಲು ಮಾಡಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.