ಮೈಸೂರು:- ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನಲ್ಲಿ ಅವಘಡ ಒಂದು ಸಂಭವಿಸಿದ್ದು, ನೀರಿನಲ್ಲಿ ಮುಳುಗಿ ತಾತ ಹಾಗೂ ಇಬ್ಬರು ಮೊಮ್ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಜರುಗಿದೆ.
Advertisement
70 ವರ್ಷದ ಚೌಡಯ್ಯ, 13 ವರ್ಷದ ಭರತ್, 10 ವರ್ಷದ ಧನುಷ್ ಮೃತ ದುರ್ದೈವಿಗಳು ಎನ್ನಲಾಗಿದೆ. ಮೃತರು ಟಿ ನರಸೀಪುರ ಪಟ್ಟಣದ ತಿರುಮಕೂಡಲಿನ ನಿವಾಸಿಗಳು ಎನ್ನಲಾಗಿದೆ. ಕಾವೇರಿ ನದಿ ಬಳಿಗೆ ತೆರಳಿದ್ದ ವೇಳೆ ಈ ದುರ್ಘಟನೆ ಜರುಗಿದೆ. ಮೊದಲು ಇಬ್ಬರು ಮೊಮ್ಮಕ್ಕಳು ನೀರಿನಲ್ಲಿ ಮುಳುಗಿದ್ದ ಹಿನ್ನೆಲೆ, ಮಕ್ಕಳ ರಕ್ಷಣೆಗೆ ತಾತ ಚೌಡಯ್ಯ ತೆರಳಿದ್ದಾರೆ. ಆದರೆ ದುರಾದೃಷ್ಟವಶಾತ್ ಇಬ್ಬರು ಮೊಮ್ಮಕ್ಕಳನ್ನ ರಕ್ಷಿಸಲಾಗದೆ ತಾವು ಕೂಡ ಸಾವನ್ನಪ್ಪಿದ್ದಾರೆ. ಇನ್ನೂ ಮೃತದೇಹಗಳನ್ನು ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


