ಮಂಗಳೂರು:- ಆಕಸ್ಮಿಕವಾಗಿ ಐದನೇ ಮಹಡಿಯಿಂದ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಮಂಗಳೂರಿನ ಮೇರಿಹಿಲ್‍ನ ಮಾತಾ ರೆಸಿಡೆನ್ಸಿ ಅಪಾರ್ಟ್‍ಮೆಂಟ್‍ನಲ್ಲಿ ಜರುಗಿದೆ.
Advertisement
13 ವರ್ಷದ ಸಮರ್ಜಿತ್ ಮೃತ ಬಾಲಕ. ಬಾಲಕ ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಂಗ ಮಾಡುತ್ತಿದ್ದ. ಆಕಸ್ಮಿಕವಾಗಿ ಐದನೇ ಮಹಡಿಯಿಂದ ಬಿದ್ದ ಪರಿಣಾಮ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿದೆ. ತಕ್ಷಣ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.