ನೀನು ಚೆನ್ನಾಗಿಲ್ಲ, ನನಗೆ ಸರಿಯಾದ ಜೋಡಿಯಲ್ಲ ಎಂದು ಪತ್ನಿ ನಿಂದನೆ: ಮನನೊಂದು ಪತಿ ಸೂಸೈಡ್!

0
Spread the love

ಚಾಮರಾಜನಗರ:- ನೀನು ಚೆನ್ನಾಗಿಲ್ಲ, ನನಗೆ ಸರಿಯಾದ ಜೋಡಿಯಲ್ಲ ಎಂದು ಪತ್ನಿಯ ನಿಂದನೆ ಮಾತುಗಳಿಂದ ಮನನೊಂದು ಪತಿ ಸೂಸೈಡ್ ಮಾಡಿಕೊಂಡ ಘಟನೆ ಜಿಲ್ಲೆಯ ಉಡಿಗಾಲ ಗ್ರಾಮದಲ್ಲಿ ಜರುಗಿದೆ.

Advertisement

32 ವರ್ಷದ ಪರಶಿವ ಆತ್ಮಹತ್ಯೆ ಮಾಡಿಕೊಂಡ ಪತಿ ಎಂದು ಗುರುತಿಸಲಾಗಿದೆ. ನೀನು ಚನ್ನಾಗಿಲ್ಲ, ನನಗೆ ಸರಿಯಾದ ಜೋಡಿಯಲ್ಲ ಎಂದು ಪತ್ನಿ ಎಲ್ಲರ ಎದುರೇ ಅವಮಾನ ಮಾಡುತ್ತಿದ್ದಳು. ಶೊಕಿವಾಲೆಯಾಗಿದ್ದ ಪತ್ನಿ ಹೈಫೈ ಜೀವನ ಮಾಡಲು ಬಯಸಿದ್ದಳು. ಅಲ್ಲದೇ ರೀಲ್ಸ್ ಗೀಳು ಕೂಡ ಇತ್ತು.

ಒಳ್ಳೆ ಬಟ್ಟೆ ಕೊಡಿಸು, ಆಭರಣ ಕೊಡಿಸು, ಬೇರೆಮನೆ ಮಾಡು ಎಂದು ಪತ್ನಿ ಪತಿಗೆ ಮಾನಸಿಕ ಹಾಗು ದೈಹಿಕ ಕಿರುಕುಳ ನೀಡುತ್ತಿದ್ದಳು. ಇಷ್ಟು ಮಾತ್ರವಲ್ಲದೇ ಸುಳ್ಳು ವರದಕ್ಷಿಣೆ ಕೇಸ್ ಹಾಕಿ ಪತಿಯನ್ನು ಒಂದೂವರೆ ತಿಂಗಳು ಜೈಲಿಗೆ ಕೂಡ ಕಳಿಸಿದ್ದಳು. ಪತ್ನಿಯ ಕಿರುಕುಳದಿಂದ ಬೇಸತ್ತು ಪತಿ ಪರಶಿವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here