ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ಅರಣ್ಯ ಇಲಾಖೆ, ಕರ್ನಾಟಕ ಮೃಗಾಲಯ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆ ಗದಗ ಇವರ ವತಿಯಿಂದ ಕಪ್ಪತ್ತಗುಡ್ಡ ಜೆಎಲ್ಆರ್ ಪ್ರಕೃತಿ ಶಿಬಿರದ ಶಂಕುಸ್ಥಾಪನೆ, ಗದಗ ಮೃಗಾಲಯದ ಅಭಿವೃದ್ಧಿಗಾಗಿ ಭೂಸ್ವಾದೀನಪಡಿಸಿಕೊಂಡ ಭೂಮಿಯ ಶಂಕುಸ್ಥಾಪನೆ, ವಲಯ ಅರಣ್ಯ ಅಧಿಕಾರಿಗಳ ನೂತನ ಕಚೇರಿ ಮತ್ತು ನೂತನ ವಸತಿಗೃಹ, ಶಿಶುಗಳಿಗೆ ಹಾಲುಣಿಸುವ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ರವಿವಾರ ಗದುಗಿನ ಬಿಂಕದಕಟ್ಟಿಯಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ, ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ಶಾಸಕರಾದ ಜಿ.ಎಸ್. ಪಾಟೀಲ, ರಾಜ್ಯ ವಿಧಾನಪರಿಷತ್ ಸದಸ್ಯ ಸಲೀಂ ಅಹಮದ್, ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.