ನೆಲಮಂಗಲ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ರಾಯರಪಾಳ್ಯ ಬಳಿ ಜರುಗಿದೆ.
Advertisement
ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ನೆಲಮಂಗಲ ಸಂಚಾರಿ ಪೊಲೀಸರು ಪರಿಶೀಲಿಸಿ, ಅಪರಿಚಿತ ವಾಹನದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಇನ್ನೂ ಮಹಿಳೆ ಮೃತದೇಹ ಡಾಬಸ್ ಪೇಟೆ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಘಟನೆ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.