HomeKarnataka Newsಗ್ಯಾರಂಟಿ ಯೋಜನೆಗಳಿಂದ ಬಡವರಲ್ಲಿ ಆತ್ಮವಿಶ್ವಾಸ ಹೆಚ್ಚಿದ್ದು ಮಾತ್ರವಲ್ಲ, ಸ್ವಾಭಿಮಾನ ಹೆಚ್ಚುತ್ತಿದೆ: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಯೋಜನೆಗಳಿಂದ ಬಡವರಲ್ಲಿ ಆತ್ಮವಿಶ್ವಾಸ ಹೆಚ್ಚಿದ್ದು ಮಾತ್ರವಲ್ಲ, ಸ್ವಾಭಿಮಾನ ಹೆಚ್ಚುತ್ತಿದೆ: ಸಿಎಂ ಸಿದ್ದರಾಮಯ್ಯ

For Dai;y Updates Join Our whatsapp Group

Spread the love

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಬಡವರಲ್ಲಿ ಆತ್ಮವಿಶ್ವಾಸ ಹೆಚ್ಚಿದ್ದು ಮಾತ್ರವಲ್ಲ, ಸ್ವಾಭಿಮಾನ ಹೆಚ್ಚುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ಶ್ರೀಮಂತರು ಶ್ರೀಮಂತರಾದರೆ, ಬಡವರು ಬಡವರಾಗುತ್ತಿದ್ದಾರೆ. ಈ ಅಸಮಾನತೆಯನ್ನು ತೊಡೆದು ಹಾಕಲು ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಗ್ಯಾರಂಟಿ ಯೋಜನೆಗಳಿಂದ ಬಡವರಲ್ಲಿ ಆತ್ಮವಿಶ್ವಾಸ ಹೆಚ್ಚಿದ್ದು ಮಾತ್ರವಲ್ಲ, ಸ್ವಾಭಿಮಾನ ಹೆಚ್ಚುತ್ತಿದೆ. ಜನರು ಸಾಮಾಜಿಕವಾಗಿ ಆರ್ಥಿಕವಾಗಿ ನಿರ್ಭಯವಾಗಿ, ಅವರ ಬದುಕು ಸುಧಾರಣೆಯಾಗಿದೆ. ಸಮಾನತೆಯ ಭಾವ ಉಂಟಾಗುತ್ತಿದೆ ಎಂದರು.

2020 ರಲ್ಲಿ ನಾವು ಗ್ಯಾರಂಟಿಗಳನ್ನು ಘೋಷಿಸಿದಾಗಲೂ ಪತ್ರಿಕೆಗಳು ಶ್ಲಾಘಿಸಿ ಬರೆದಿವೆ. ನೀವೆಲ್ಲಾ ಇದನ್ನು ವಿರೋದಿಸಿದ್ದೀರಿ.  ರಾಜ್ಯಸರ್ಕಾರ ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತದೆ. ಅಭಿವೃದ್ಧಿಗೆ ಹಣವಿರುವುದಿಲ್ಲ ಎಂದು ನೀವು ಮಾತ್ರವಲ್ಲ ದೇಶದ ಪ್ರಧಾನಿಗಳು ಕೂಡ ಟೀಕಿಸಿದ್ದರು.

ಆದರೆ ನೀವೇ ಲೋಕಸಭಾ ಚುನಾವಣೆಯಲ್ಲಿ ಮೋದಿ ಕಿ ಗ್ಯಾರಂಟಿ ಎಂದು ಘೋಷಣೆ ಮಾಡಿದ್ದೀರಿ. ಗ್ಯಾರಂಟಿಗಳನ್ನು ನಿರಂತರವಾಗಿ ವಿರೋಧಿಸಿದವರೆ ಈ ಕೆಲಸ ಮಾಡಿದ್ದೀರಿ. ಅನೇಕ ರಾಜ್ಯಗಳಲ್ಲಿ ಇದನ್ನು ನಕಲು ಮಾಡಿದ್ದೀರಿ.  ಬಿಜೆಪಿಯವರು  ವ್ಯಕ್ತಿ ಪೂಜೆಯನ್ನು ಕಲಿತಿದ್ದಾರೆ. ನಾವು ವ್ಯಕ್ತಿ ಪೂಜೆ ಮಾಡುವುದಿಲ್ಲವಾದ್ದರಿಂದ ಸಿದ್ದರಾಮಯ್ಯ ಗ್ಯಾರಂಟಿ ಎಂದು ಘೋಷಣೆ ಮಾಡಿಲ್ಲ. ನಾವು ರಾಜ್ಯದ ಜನರ ಗ್ಯಾರಂಟಿ ಎಂದು ಘೋಷಿಸಿದ್ದಾಗಿ ಟೀಕಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!