Death: ಲೈಟ್ ಕಂಬ ಬಿದ್ದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು!

0
Spread the love

ಬೆಂಗಳೂರು:- ಲೈಟ್ ಕಂಬ ಬಿದ್ದು ಇಬ್ಬರು ಮಹಿಳೆಯರು ಸ್ಧಳದಲ್ಲೇ ಸಾವನ್ನಪ್ಪಿರುವ ಘಟನೆ ಬೈಯ್ಯಪನಹಳ್ಳಿ ಬಳಿಯ ಸದ್ದುಗುಂಟೆಪಾಳ್ಯದಲ್ಲಿ ಜರುಗಿದೆ.

Advertisement

ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಕಂಬ ಬಿದ್ದು ಈ ದುರಂತ ಸಂಭವಿಸಿದೆ. ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಜೆಸಿಬಿ ಲೈಟ್ ಕಂಬಕ್ಕೆ ತಗುಲಿ ಕಂಬ ಬಿದ್ದಿದೆ. ಈ ವೇಳೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ಕಂಬ ಬಿದ್ದಿದೆ. ಲೈಟ್ ಕಂಬ ಏಕಾಏಕಿ ಬಿದ್ದಿದ್ದರಿಂದ ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ.

ಕೂಡಲೇ ಬೈಯ್ಯಪನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here