ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ: ವಿಚಾರಣೆಗೆ ಗ್ರೀನ್‌ ಸಿಗ್ನಲ್‌ ನೀಡಿದ ಸುಪ್ರೀಂ ಕೋರ್ಟ್

0
Spread the love

ರೇಣುಕಾಸ್ವಾಮಿ ಕೊಲೆ ಕೇಸ್‌ ನಲ್ಲಿ ಸುಮಾರು ೭ ತಿಂಗಳ ಕಾಲ ಜೈಲಿನಲ್ಲಿದ್ದ ಆರೋಪಿಗಳು ಹೊರ ಬಂದಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳಾದ ದರ್ಶನ್‌ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾದ್ರೆ ನಟಿ ಪವಿತ್ರಾ ಗೌಡ ತಮ್ಮ ರೆಡ್‌ ಕಾರ್ಪೆಟ್‌ ಸ್ಟುಡಿಯೋ ರೀಲಾಂಚ್‌ ಮಾಡಿದ್ದಾರೆ. ಪ್ರಕರಣದ ಎಲ್ಲಾ ಆರೋಪಿಗಳ ಸಹಜ ಜೀವನಕ್ಕೆ ಮರಳಿದ್ದು ಈ ಮಧ್ಯೆ ಎಲ್ಲರಿಗೂ ಮತ್ತೊಂದು ಟೆನ್ಷನ್‌ ಶುರುವಾಗಿದೆ. ಆರೋಪಿಗಳ ಜಾಮೀನು ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.

Advertisement

ಡಿಸೆಂಬರ್ ತಿಂಗಳಲ್ಲಿ ರಾಜ್ಯ ಹೈಕೋರ್ಟ್​ ರೇಣುಕಾ ಸ್ವಾಮಿ ಕೊಲೆ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಇನ್ನೂ ಕೆಲವರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಅದರ ಬೆನ್ನಲ್ಲೆ ಪೊಲೀಸ್ ಇಲಾಖೆಯು ಗೃಹ ಇಲಾಖೆಯ ಅನುಮತಿ ಪಡೆದು ಆರೋಪಿಗಳ ಜಾಮೀನು ರದ್ದು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಈ ವರೆಗೆ ನಡೆದಿರಲಿಲ್ಲ. ಇದೀಗ ಜಾಮೀನು ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸುವಂತೆ ವಕೀಲ ವಕೀಲ ಅನಿಲ್ ಕುಮಾರ್ ನಿಶಾನಿ ಮನವಿ ಮಾಡಿದ್ದಾರೆ.

ವಕೀಲ ಅನಿಲ್ ಕುಮಾರ್ ನಿಶಾನಿ ಅವರ ಮನವಿಗೆ ಸ್ಪಂದಿಸಿರುವ ಸುಪ್ರೀಂಕೋರ್ಟ್ ಏಪ್ರಿಲ್ 2 ರಂದು ಅರ್ಜಿಯ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಇದು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ತಲೆ ನೋವು ತರಿಸಿದೆ.

ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಮನವಿ ಸಲ್ಲಿಸಲಾಗಿದೆ. ದರ್ಶನ್ ಪರವಾಗಿ ಸುಪ್ರೀಂಕೋರ್ಟ್​ನಲ್ಲಿಯೂ ವಕೀಲ ನಾಗೇಶ್ ಅವರೇ ವಾದ ಮಂಡಿಸುವ ಸಾಧ್ಯತೆ ಇದೆ. ಸರ್ಕಾರದ ಪರವಾಗಿ ಅನಿಲ್ ಕುಮಾರ್ ನಿಶಾನಿ ಅವರು ವಾದಿಸುವ ಸಾಧ್ಯತೆ ದಟ್ಟವಾಗಿದ್ದು ಈ ಬಾರಿ ತೀರ್ಪು ಯಾರ ಪರ ಬರಲಿದೆ ಎಂಬ ಕುತೂಹಲ ಶುರುವಾಗಿದೆ.


Spread the love

LEAVE A REPLY

Please enter your comment!
Please enter your name here