ನವದೆಹಲಿ: ಬರೋಬ್ಬರಿ 10 ತಿಂಗಳ ಬಳಿಕ ಭಾರತೀಯ ಮೂಲದ ಅಮೆರಿಕನ್ ಗಗನಯಾತ್ರಿ ಸುನಿತಾ ವಿಲಿಯಮ್ಸ್, ಭೂಮಿಗೆ ಸುರಕ್ಷಿತವಾಗಿ ಮರಳುತ್ತಿದ್ದಾರೆ. ಕೇವಲ 8 ದಿನದ ಅಧ್ಯಯನಕ್ಕೆಂದು ತೆರಳಿದ್ದ ಅವರು 9 ತಿಂಗಳುಗಳ ಕಾಲ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಸಿಲುಕಿಕೊಂಡಿದ್ದರು. ಇದೀಗ ಮಂಗಳವಾರ ಬೆಳಗ್ಗೆ 8.30ಕ್ಕೆ ಐಎಸ್‌ಎಸ್‌ನಿಂದ ನೌಕೆ ಹೊರಟಿದೆ. ಬುಧವಾರ ಮುಂಜಾನೆ 3 ಗಂಟೆ ಫ್ಲೋರಿಡಾದ ಸಮುದ್ರದ ಮೇಲೆ ನೌಕೆಯು ಇಳಿಯಲಿದೆ. ಅಲ್ಲಿಂದ ವಿಶೇಷ ದೋಣಿಗಳ ಮೂಲಕ ಕರಾವಳಿಗೆ ಆಗಮಿಸಲಿದ್ದಾರೆ.
ಇನ್ನೂ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿದ್ದ ಭಾರತ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಬರುವಿಕೆಗಾಗಿ ಇಡೀ ಜಗತ್ತೇ ಉಸಿರು ಬಿಗಿ ಹಿಡಿದು ಕಾಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಭಾರತದ ಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು ಪತ್ರ ಬರೆದಿದ್ದಾರೆ. ‘‘ನೀವು ಸಾವಿರಾರು ಮೈಲುಗಳಷ್ಟು ದೂರವಿದ್ದರೂ ಸದಾ ನಮ್ಮ ಹೃದಯಕ್ಕೆ ಹತ್ತಿರವಾಗಿರುತ್ತೀರಿ’’ ಎಂದು ಮೋದಿ ಪತ್ರದಲ್ಲಿ ಬರೆದಿದ್ದಾರೆ.
ಈ ಪತ್ರವು 143 ಕೋಟಿ ಭಾರತೀಯರ ಹೆಮ್ಮೆಯನ್ನು ಪ್ರತಿಬಿಂಬಿಸುತ್ತದೆ. ಕೆಲವು ದಿನಗಳ ಹಿಂದೆ ಒಂದು ಕಾರ್ಯಕ್ರಮದಲ್ಲಿ ಮಾಸ್ಸಿಮಿನೊ ಅವರನ್ನು ಭೇಟಿಯಾಗಿ ತಮ್ಮ ಭಾರತದ ಜನರ ಪರವಾಗಿ ಈ ಪತ್ರವನ್ನು ಸುನಿತಾಗೆ ತಲುಪಿಸಬೇಕೆಂದು ಮನವಿ ಮಾಡಿದ್ದರು.
ಅವರ ಸುರಕ್ಷಿತ ಮರಳುವಿಕೆಗೆ ಹಾರೈಸುತ್ತಾ ಪ್ರಧಾನಿ ಮೋದಿ ಭಾರತದ ಶ್ರೇಷ್ಠ ಮಗಳೊಂದಿಗಿನ ಆಳವಾದ ಬಾಂಧವ್ಯವನ್ನು ಪುನರುಚ್ಚರಿಸಿದರು. ಈ ಕುರಿತು ಸಚಿವ ಜಿತೇಂದ್ರ ಸಿಂಗ್ ಪ್ರಧಾನಿ ಮೋದಿಯವರ ಪತ್ರವನ್ನು ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ.