ರಾಯಚೂರು:- ರಾಯಚೂರಿನ ಲಿಂಗಸುಗೂರು ತಾಲೂಕಿನ ಗುರಗುಂಟಾ ಬಳಿ ಆಟೋರಿಕ್ಷಾ ಪಲ್ಟಿಯಾದ ಪರಿಣಾಮ ರೈತ ಮುಖಂಡ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜರುಗಿದೆ.
55 ವರ್ಷದ ವೀರನಗೌಡ ಉದ್ಬಾಳ ಮೃತ ವ್ಯಕ್ತಿ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರೈತ ಮುಖಂಡ, ಗೌಡೂರು ಗ್ರಾಮ ಘಟಕದ ಅಧ್ಯಕ್ಷರಾಗಿದ್ದ ವೀರನಗೌಡ ಅವರು, ಲಿಂಗಸುಗೂರಿನಿಂದ ಸ್ವಗ್ರಾಮ ಗೌಡೂರಿಗೆ ತೆರಳುತ್ತಿದ್ದರು. ಈ ವೇಳೆ ಆಟೋ ಪಲ್ಟಿಯಾಗಿದ್ದು, ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಆಟೋ ವೇಗವಾಗಿ ಚಲಿಸುತ್ತಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.



