ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿರುವ ರನ್ಯಾ ರಾವ್ಗೆ ದಿನದಿಂದ ದಿನಕ್ಕೆ ಕಾನೂನಿನ ಕುಣಿಕೆ ಬಿಗಿಯಾಗುತ್ತಾ ಸಾಗುತ್ತಿದೆ. ಸದ್ಯ ಈ ಸ್ಮಗ್ಲಿಂಗ್ ಕೇಸ್ನ್ನು ಮೂರು ಆಯಾಮಗಳಲ್ಲಿ ಪ್ರತ್ಯೇಕ ತನಿಖೆ ನಡೆಸಲಾಗುತ್ತಿದೆ. ಇದರ ನಡುವೆ ಶಾಸಕ ಯತ್ನಾಳ್ ರನ್ಯಾ ವಿರುದ್ಧ ಆಕೆ ದೇಹದಾದ್ಯಂತ ಚಿನ್ನವನ್ನು ಹೊಂದಿದ್ದಳು, ರಂಧ್ರಗಳನ್ನು ಹೊಂದಿರುವಲ್ಲೆಲ್ಲಾ ಅದನ್ನು ಬಚ್ಚಿಟ್ಟಿದ್ದಳು” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಸಂಬಂಧ ರನ್ಯಾ ಪರವಾಗಿ ಅಕುಲ ಅನುರಾಧ ಅವರು ಯತ್ನಾಳ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಯತ್ನಾಳ್ ಅವರು ಅವಾಚ್ಯ ಪದ ಬಳಸಿ ನಟಿಯ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನನ್ವಯ ಬಿಎನ್‌ಎಸ್ ಸೆಕ್ಷನ್ 79 ಅಡಿ ಎಫ್‌ಐಆರ್ ದಾಖಲಾಗಿದೆ.
ಯತ್ನಾಳ್ ಅವರು ಅವಾಚ್ಯ ಪದ ಬಳಸಿ ನಟಿಯ ತೇಜೋವಧೆ ಮಾಡಿದ್ದಾರೆ ಎಂದು ರನ್ಯಾ ರಾವ್ ಪರ ಅಕುಲ ಅನುರಾಧ ಎಂಬವರು ಆರೋಪಿಸಿ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಈಗ ಯತ್ನಾಳ್ ವಿರುದ್ಧ ಬಿಎನ್‌ಎಸ್ ಸೆಕ್ಷನ್ 79 ಅಡಿಯಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.