ವಿಜಯಸಾಕ್ಷಿ ಸುದ್ದಿ, ಬೆಳಗಾವಿ: ಸರಿಯಾಗಿ ನಿಯಂತ್ರಣ ಮಾಡದಿರೆ ಕೊರೊನಾ ಮಹಾರೋಗವಲ್ಲ. ಅದನ್ನು ನಿಯಂತ್ರಣಕ್ಕೆ ತರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಭಿಪ್ರಾಯ ಪಟ್ಟಿದ್ದಾರೆ.
ಜನರು ಗಂಭೀರ ಪರಿಸ್ಥಿತಿ ಇದ್ದರೆ ಮಾತ್ರ ಆಸ್ಪತ್ರೆಗೆ ದಾಖಲಾಗಬೇಕು. ಇಲ್ಲದಿದ್ದರೆ ಮನೆಯಲ್ಲಿಯೇ ಐಸೊಲೇಟ್ ಆಗಿ ಇರಬೇಕು. ಯೋಗ, ಪ್ರಾಣಾಯಾಮ, ವ್ಯಾಯಾಮ, ಉತ್ತಮ ಆಹಾರ ಸೇವಿಸಿದರೆ ಸೋಂಕು ನಿಯಂತ್ರಣ ಮಾಡಬಹುದು. ವೈದ್ಯರ ಸಲಹೆ ಪಡೆದರೆ ಕೊರೊನಾ ನಿಯಂತ್ರಣಕ್ಕೆ ಬರುತ್ತದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಗೋಕಾಕ್ ತಹಸೀಲ್ದಾರ್ ಕಚೇರಿಯಲ್ಲಿ ಕೋವಿಡ್ ನಿರ್ವಹಣಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೊರೊನಾ ನಿಯಂತ್ರಿಸಲು ಅಧಿಕಾರಿಗಳಿಗೆ ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು. ಸಿಡಿ ಪ್ರಕರಣದಲ್ಲಿ ಇದೇ ಮೊದಲ ಬಾರಿಗೆ ಅವರು ಸಭೆಗೆ ಹಾಜರಾಗಿದ್ದಾರೆ.
ಸದ್ಯ ರಾಜ್ಯದಲ್ಲಿ ಮಹಾಮಾರಿಯ ಅಲೆ ಜೋರಾಗಿದೆ. ಹೀಗಾಗಿ ಸಿಎಂ, ಸರ್ಕಾರದೊಂದಿಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ. ಪ್ರತಿಯೊಬ್ಬರೂ ಕರ್ತವ್ಯ ನಿರ್ವಹಿಸಿ ಕೆಲಸ ಮಾಡಿ ಬೇಗನೆ ಮಹಾಮಾರಿ ತಡೆಗಟ್ಟಬಹುದು ಎಂದು ಹೇಳಿದ್ದಾರೆ.



