ವಸ್ತುಗಳನ್ನು ಖರೀದಿಸುವಾಗ ಪರಿಶೀಲಿಸಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕಾನೂನು ಮಾಪನ ಶಾಸ್ತç ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಇಲಾಖೆ, ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮಹಾವಿದ್ಯಾಲಯದ ಎ.ಸಿ. ಆಡಿಟೋರಿಯಂ ಹಾಲ್‌ನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಜರುಗಿತು.

Advertisement

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ್ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಹಕರು ಯಾವುದೇ ವಸ್ತುವನ್ನು ಖರೀದಿಸುವಾಗ ಅಥವಾ ಸೇವೆ ಪಡೆಯುವಾಗ ಪರಿಶೀಲನೆ ಮಾಡುವುದು ಅವಶ್ಯವಾಗಿದೆ. ಒಂದು ವೇಳೆ ವಸ್ತುವನ್ನು ಖರೀದಿಸಿದಾಗ ಮೋಸ ಹೋದಲ್ಲಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎ.ಜಿ. ಮಾಲ್ದಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರರಾದ ಎಸ್.ಜಿ. ಪಲ್ಲೇದ, ಜಿಮ್ಸ್ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ.ಐ. ಹಿರೇಮನಿ ಪಾಟೀಲ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಜಿಮ್ಸ್ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ಇದೇ ಸಂದರ್ಭದಲ್ಲಿ ತೂಕ ಮತ್ತು ಅಳತೆ ಮತ್ತು ಪೊಟ್ಟಣ ಸಾಮಗ್ರಿಗಳ ವಸ್ತು ಪ್ರದರ್ಶನ, ಆಹಾರ ಸುರಕ್ಷತೆ ಮತ್ತು ಆಹಾರ ಕಲಬೆರಕೆ ಕುರಿತು ಭಿತ್ತಿಚಿತ್ರ ಪ್ರದರ್ಶನ ಜರುಗಿತು.


Spread the love

LEAVE A REPLY

Please enter your comment!
Please enter your name here