ಬೆಂಗಳೂರು: ಪುಟ್ಟೇನಹಳ್ಳಿ ಪೊಲೀಸರು ಕಾರ್ಯಚರಣೆ ನಡೆಸಿ ಬೈಕ್ ಮತ್ತು ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
Advertisement
ಕಿರಣ್ ಮತ್ತು ಮಾರಿಮತ್ತು ಬಂಧಿತ ಆರೋಪಿಗಳಾಗಿದ್ದು, ಬೆಂಗಳೂರಿನಲ್ಲಿ ಒಂಟಿಯಾಗಿ ಓಡಾಡುತ್ತಿದ್ದ ಹಾಗೂ ಒಂಟಿ ಬೈಕ್ ಗಳನ್ನು ಕಂಡರೆ ಕಳ್ಳತನ ಮಾಡಿ ಎಸ್ಕೇಪ್ ಆಗುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ 3.50 ಲಕ್ಷ ರೂ. ಮೌಲ್ಯದ 4 ಬೈಕ್, 10 ಮೊಬೈಲ್ ವಶಕ್ಕೆ ಪಡೆದಿದ್ದು, ಘಟನೆ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.