ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ IPL 2025ರ ಆವೃತ್ತಿಯ ಶನಿವಾರದಿಂದ ಆರಂಭವಾಗಲಿದೆ. ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಉದ್ಘಾಟನಾ ಸಮಾರಂಭ ಪಂದ್ಯ ನಡೆಯಲಿದೆ.
ಪಂದ್ಯ ಆರಂಭಕ್ಕೆ ಮುನ್ನ ಅದ್ದೂರಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಆದರೆ ಐಪಿಎಲ್ 2025ರ ಮೊದಲ ಪಂದ್ಯ ನಡೆಯುವುದೇ ಅನುಮಾನ ಎನ್ನಲಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಇದೀಗ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.
ಭಾರತೀಯ ಹವಾಮಾನ ಇಲಾಖೆ ಗುರುವಾರದಿಂದ ಭಾನುವಾರದವರೆಗೆ ದಕ್ಷಿಣ ಬಂಗಾಳಕ್ಕೆ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯಲ್ಲಿ ತಿಳಿಸಿದೆ. ಮಾರ್ಚ್ 22ರಂದು ಶನಿವಾರ ಅಂದರೆ ಐಪಿಎಲ್ ಪಂದ್ಯದ ದಿನವೇ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೋಷಿಸಿದೆ.
ಆಕ್ಯುವೆದರ್ ಮುನ್ಸೂಚನೆ ಪ್ರಕಾರ ಶನಿವಾರ ಕೋಲ್ಕತಾದಲ್ಲಿ ಮಳೆಯಾಗುವ ಸಾಧ್ಯತೆ 74% ರಷ್ಟಿದೆ. 97% ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ 90% ಇರಲಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಪಂದ್ಯದ ಆರಂಭದ ವೇಳೆಗೆ ಮಳೆ ಜೋರಾಗುವ ಸಾಧ್ಯತೆ ಇದ್ದು, ಪಂದ್ಯ ನಡೆಯುವುದರ ಮೇಲೆ ಆತಂಕ ಮೂಡಿಸಿದೆ.