ಚಿಕ್ಕಮಗಳೂರು:- 18 ವರ್ಷದ ಯುವಕನೋರ್ವ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನಕೋಟೆ ಸಮೀಪದ ಸಾಲುಮರ ಗ್ರಾಮದಲ್ಲಿ ನಡೆದಿದೆ.
18 ವರ್ಷದ ವಿಘ್ನೇಶ್ ಮೃತ ಯುವಕ. ಈತ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಕಳೆದ ನಾಲ್ಕು ವರ್ಷದ ಹಿಂದೆ ವಿಘ್ನೇಶ್‌ಗೆ ಅಪಘಾತವಾಗಿತ್ತು. ಆಗ ಅಪಘಾತದಲ್ಲಿ ತನ್ನ 17 ಹಲ್ಲುಗಳನ್ನ ಕಳೆದುಕೊಂಡಿದ್ದ. ಇದರಿಂದಾಗಿ ಜಿಗುಪ್ಸೆಗೊಂಡಿದ್ದ ವಿಘ್ನೇಶ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



