ಬಿಗ್ ಬಾಸ್ ಮಾಜಿ ಸ್ಪರ್ಧಿಗಳ ಎಡವಟ್ಟು: ರಜತ್, ವಿನಯ್ ಮೇಲೆ ದಾಖಲಾಯ್ತು ಕೇಸ್!

0
Spread the love

ಬೆಂಗಳೂರು:- ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಹಾಗೂ ವಿನಯ್ ಗೌಡ ಮೇಲೆ ಕೇಸ್ ದಾಖಲಾಗಿದೆ. ರೀಲ್ಸ್ ಮಾಡುವಾಗ ಅವರು ಮಾಡಿಕೊಂಡ ಯಡವಟ್ಟು ಈಗ ಅವರನ್ನು ತೊಂದರೆಗೆ ಸಿಲುಕಿಸಿದೆ.

Advertisement

ವಿನಯ್‌ಗೌಡ ಹಾಗೂ ರಜತ್ ಕಿಶನ್‌ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಬಸವೇಶ್ವರನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ರಜತ್ ಇನ್ಟಾಗ್ರಾಂ ಅಕೌಂಟ್‌ನಲ್ಲಿ ರೀಲ್ಸ್ ಅಪ್ಲೋಡ್ ಮಾಡಲಾಗಿದೆ. ಲಾಂಗ್ ಹಿಡಿದು ಭಯದ ವಾತಾವರಣ ಸೃಷ್ಟಿಸುವ ರೀಲ್ಸ್ ಮಾಡಲಾಗಿದ್ದು, ಇದು ಸಮಸ್ಯೆಗೆ ಕಾರಣವಾಗಿದೆ. ನಿಷೇಧಿತ ಮಾರಕಾಸ್ತ್ರ ಹಿಡಿದುಕೊಂಡು ರೀಲ್ಸ್ ಮಾಡಿರೋದು ಕಾನೂನು ಬಾಹಿರ. ಹೀಗಾಗಿ ಬಸವೇಶ್ವರ ನಗರ ಠಾಣೆಯಲ್ಲಿ ಇವರಿಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here