ಮಂಡ್ಯ:- ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನಲ್ಲಿ ಸಾವಿರಾರು ಕ್ಯೂಸೆಕ್ ನೀರು ಪೋಲಾಗಿರುವ ಘಟನೆ ಜರುಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ.
Advertisement
ಹೌದು, ಭಾನುವಾರ ರಾತ್ರಿ ಏಕಾಏಕಿ ಕೆಆರ್‌ಎಸ್ ಡ್ಯಾಂನ +80 ಗೇಟ್ ಓಪನ್ ಆಗಿ ನದಿಗೆ ನೀರು ಹರಿದು ವ್ಯರ್ಥವಾಗಿದೆ. ಭಾನುವಾರ ರಾತ್ರಿ ಓಪನ್ ಆಗಿರುವ ಗೇಟ್‌ನಿಂದ ಸೋಮವಾರ ರಾತ್ರಿಯವರೆಗೂ ಡ್ಯಾಂ ನೀರು ಹರಿದು ನದಿ ಸೇರಿದೆ. ಗೇಟ್ ಓಪನ್ ಆಗಿದ್ದರೂ ಸಹ ಅಧಿಕಾರಿಗಳು ಗೇಟ್ ಮುಚ್ಚದೇ ನಿರ್ಲಕ್ಷ್ಯ ತೋರುವುದು ಮೇಲ್ನೋಟಕ್ಕೆ ತಿಳಿದಿದೆ.
ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಈ ನಿರ್ಲಕ್ಷ್ಯಕ್ಕೆ 2 ಸಾವಿರ ಕ್ಯೂಸೆಕ್ ನೀರು ನದಿ ಪಾಲು ಆಗಿದೆ. ಗೇಟ್ ಇದ್ದಕ್ಕಿದ್ದಂತೆ ಯಾಕೆ? ಹೇಗೆ? ಓಪನ್ ಆಯಿತು ಎಂಬುದು ಇನ್ನೂ ನಿಗೂಢವಾಗಿದೆ. ಸಿಬ್ಬಂದಿಗಳ ಯಡವಟ್ಟಿನಿಂದ ಗೇಟ್ ಓಪನ್ ಆಯ್ತಾ ಎಂಬ ಪ್ರಶ್ನೆ ರೈತರಲ್ಲಿ ಮೂಡಿದೆ.