HomeGadag Newsಡಿ.ಎಸ್.ಎಸ್ ಮಹಿಳಾ ಪದಾಧಿಕಾರಿಗಳ ಆಯ್ಕೆ

ಡಿ.ಎಸ್.ಎಸ್ ಮಹಿಳಾ ಪದಾಧಿಕಾರಿಗಳ ಆಯ್ಕೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟನೆಯ ಜಿಲ್ಲಾ ಮಹಿಳಾ ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯನ್ನು ನಗರದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿತ್ತು. ಸಭೆಗೆ ರಾಜ್ಯ ಸಂಘಟನಾ ಸಂಚಾಲಕ ಎಸ್.ಎನ್. ಬಳ್ಳಾರಿ, ರಾಜ್ಯ ವಿಭಾಗೀಯ ಸಂಚಾಲಕ ಪ್ರಕಾಶ ಎಮ್.ಹೊಸಳ್ಳಿ, ಜಿಲ್ಲಾ ಸಂಚಾಲಕ ದುರಗಪ್ಪ ಎಲ್.ಹರಿಜನ, ಜಿಲ್ಲಾ ಸಂಘಟನಾ ಸಂಚಾಲಕ ಸತೀಶ ಎಚ್.ಹುಲಿ, ಮಹಿಳಾ ಘಟಕದ ಜಿಲ್ಲಾ ಸಂಚಾಲಕಿ ಸುಶೀಲಾ ಶಿವಾನಂದ ಚಲವಾದಿ, ಜಿಲ್ಲಾ ಸಂಘಟನಾ ಸಂಚಾಲಕಿ ಸುಮಂಗಲಾ ಡಂಬಳ, ವಿದ್ಯಾರ್ಥಿ ಘಟಕದ ಸಂಚಾಲಕ ಕೃಷ್ಣ ಎಮ್.ಪೂಜಾರ ಮುಂತಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಎಸ್.ಎನ್. ಬಳ್ಳಾರಿ ಮಾತನಾಡಿ, ಈ ಸಂಘಟನೆಯು ಈಗಾಗಲೇ ರಾಜ್ಯ ಮಟ್ಟದಲ್ಲಿ ಕ್ರಿಯಾಶೀಲವಾಗಿ ಕಾರ್ಯಚಟುವಟಿಕೆ ಮಾಡುತ್ತಿದೆ. ಗದಗದಲ್ಲಿಯ ಕೂಡ ಮಹಿಳಾ ಸಂಘಟನೆಯನ್ನು ಕ್ರಿಯಾಶೀಲಗೊಳಿಸಿ ನೊಂದ ಮಹಿಳೆಯರಿಗೆ ನ್ಯಾಯ ಕೊಡುವ ನಿಟ್ಟಿನಲ್ಲಿ ಸಕ್ರಿಯರಾಗಿದ್ದೇವೆ ಹೇಳಿದರು.

ಪ್ರಕಾಶ ಹೊಸಳ್ಳಿ ಮಾತನಾಡಿ, ಜಿಲ್ಲಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ನೊಂದ ಸಮುದಾಯದ ಏಳಿಗೆಗಾಗಿ ಕೆಲಸ ಮಾಡಬೇಕು. ಮಹಿಳಾ ಸಂಘಟನೆಯವರು, ಜಿಲ್ಲಾ ಪದಾಧಿಕಾರಿಗಳು ಪ್ರತಿಯೊಂದು ಗ್ರಾಮಕ್ಕೆ ಭೇಟಿ ನೀಡಿ ನೊಂದ ಮಹಿಳೆಯರ ಬೆಂಬಲಕ್ಕೆ ನಿಲ್ಲಬೇಕು ಎಂದು ಹೇಳಿದರು.

ದುರಗಪ್ಪ ಹರಿಜನ, ಸತೀಶ ಹೂಲಿ ಮಾತನಾಡಿದರು. ಜಿಲ್ಲಾ ಸಂಘಟನಾ ಸಂಚಾಲಕರಾಗಿ ಅಂಜನಾದೇವಿ, ಮರಿಯಪ್ಪ ಮ್ಯಾಗೇರಿ, ಶೋಭಾ ಸೋಮಪ್ಪ ತಳಗೇರಿ, ಜ್ಯೋತಿ ನಿಂಗಪ್ಪ ಗೋವಿನಕೊಪ್ಪ, ದುರಗವ್ವ ದುರಗಪ್ಪ ವಡ್ಡರ, ದೇವಕ್ಕ ದುರಗಪ್ಪ ಕೋಮಣ್ಣನವರ, ಲಕ್ಷ್ಮೀ ಶಿವರಾಜ ವಡ್ಡರ ಮುಂತಾದವರನ್ನು ಆಯ್ಕೆ ಮಾಡಲಾಯಿತು. ಆಯ್ಕೆಯಾದ ಪದಾಧಿಕಾರಿಗಳಿಗೆ ಸುಭಾಸ ದೊಡ್ಡಮನಿ ಹಾಗೂ ಪರಶುರಾಮ ದೊಡ್ಡಮನಿ ಅಭಿನಂದನೆಗಳನ್ನು ಸಲ್ಲಿಸಿದರು ಎಂದು ವಿದ್ಯಾರ್ಥಿ ಒಕ್ಕೂಟದ ಸಂಚಾಲಕ ಕೃಷ್ಣಾ ಎಮ್.ಪೂಜಾರ ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!