ಬೆಂಗಳೂರು: ಕರ್ನಾಟಕದಲ್ಲಿ ಮಾತ್ರವಲ್ಲ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿರುವ ಸಚಿವ ಕೆಎನ್ ರಾಜಣ್ಣ ಆರೋಪಿಸಿರುವ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಯರ್ ವಿನಯ್ ಕುಮಾರ್ ಸಿಂಗ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿ ಆದೇಶ ಹೊರಡಿಸಿದೆ.
ನೀವು ಜಾರ್ಖಂಡ್ನವರು ನಿಮಗೇನು ಸಂಬಂಧ? ಪೊಲಿಟಿಕಲ್ ನಾನ್ಸೆನ್ಸ್ಗಳನ್ನೆಲ್ಲಾ ವಿಚಾರಣೆ ಮಾಡಲು ಆಗಲ್ಲ. ಜಡ್ಜ್ಗಳು ಏಕೆ ಹನಿಟ್ರ್ಯಾಪ್ಗೆ ಒಳಗಾಗುತ್ತಾರೆ, ಅದನ್ನು ಜಡ್ಜ್ಗಳು ನೋಡಿಕೊಳ್ಳುತ್ತಾರೆ ನಿಮಗೇನು ಸಂಬಂಧ ಎಂದು ಸುಪ್ರೀಂ ಪ್ರಶ್ನೆ ಮಾಡಿದೆ.
ರಾಜ್ಯ ರಾಜಕೀಯದಲ್ಲಿ ಸಚಿವರ ಹನಿಟ್ರ್ಯಾಪ್ ಯತ್ನದ ವಿಚಾರ ಸಾಕಷ್ಟು ಕೋಲಾಹಲ ಸೃಷ್ಟಿಸಿತ್ತು. ಇದರ ಬೆನ್ನಲ್ಲೇ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಇತ್ತೀಚೆಗೆ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ಈ ಬಗ್ಗೆ ಇಂದು ಸುಪ್ರೀಂಕೋರ್ಟ್ ವಿಚಾರಣೆ ಮಾಡಿದೆ. ಹಿರಿಯ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಾಧೀಶರ ಹನಿಟ್ರ್ಯಾಪ್ ಆರೋಪಗಳ ಬಗ್ಗೆ ಅರ್ಜಿದಾರರು ವಾದವನ್ನು ಮಂಡಿಸಿದರು. ವಾದ-ವಿವಾದ ಆಲಿಸಿದ ಸುಪ್ರೀಂಕೋರ್ಟ್ ಲಾಯರ್ ವಿನಯ್ ಕುಮಾರ್ ಸಿಂಗ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.