ಚಿಕ್ಕಮಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ HD ಕುಮಾರಸ್ವಾಮಿ ಅವರನ್ನು ಸಂಸತ್ ಭವನದ ಕಚೇರಿಯಲ್ಲಿ ಭೇಟಿ ಮಾತುಕತೆ ನಡೆಸಿದ್ದರು. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ಸತೀಶ್ ಜಾರಕಿಹೊಳಿ ನಡೆ ಕಾಂಗ್ರೆಸ್ ಪಾಳೆಯದಲ್ಲಿ ಮತ್ತೆ ಚರ್ಚೆ ಹುಟ್ಟುಹಾಕಿದೆ.
Advertisement
ಇನ್ನೂ ಈ ವಿಚಾರವಾಗಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದು ಹೇಳಿದರು. ಇನ್ನೂ ಬಸನಗೌಡ ಪಾಟೀಲ್ ಯತ್ನಾಳ್ರನ್ನು
ಪಕ್ಷದಿಂದ ಉಚ್ಚಾಟಿಸಿರುವುದಕ್ಕೆ ನಿನ್ನೆ ನಡೆದಿರುವ ಬೆಳವಣಿಗೆ ದುರದೃಷ್ಟಕರವಾದದ್ದು, ಆದರೆ ತಾನು ವ್ಯಕ್ತಿಗಿಂತ ಪಕ್ಷ ಮತ್ತು ಪಕ್ಷಕ್ಕಿಂತ ದೇಶ ಮುಖ್ಯ ಎಂದು ನಂಬಿರುವವನು, ಉಚ್ಚಾಟನೆ ವಿಷಯವನ್ನು ವಿಶ್ಲೇಷಿಸುವ ಗೋಜಿಗೆ ಹೋಗಲ್ಲ ಎಂದು ಹೇಳಿದರು.