ತುಮಕೂರು: ನನ್ನ ಮೇಲೆ ಕೊಲೆ ಯತ್ನ ನಡೆದಿದೆ ಎಂದು ಆರೋಪಿಸಿ ಸಚಿವ ಕೆ.ಎನ್ ರಾಜಣ್ಣ ಪುತ್ರನೂ ಆಗಿರುವ ಎಂಎಲ್‌ಸಿ ರಾಜೇಂದ್ರ ರಾಜಣ್ಣ ಅವರು ತುಮಕೂರು ಎಸ್ಪಿಗೆ ದೂರು ಸಲ್ಲಿಸಿದ್ದಾರೆ. ನಿನ್ನೆ ಡಿಐಜಿ ಭೇಟಿ ಮಾಡಿದ್ದ ಎಂಎಲ್ ಸಿ ರಾಜೇಂದ್ರ ಇಂದು ತುಮಕೂರು ಎಸ್ ಪಿ ಅಶೋಕ್ ವೆಂಕಟ್ ಅವರನ್ನು
Advertisement
ಖುದ್ದು ಭೇಟಿಯಾಗಿ ತಮ್ಮ ಮೇಲೆ ಕೊಲೆಯತ್ನ ನಡೆದಿದೆ ಎಂಬ ದೂರು ನೀಡಿದ್ದಾರೆ. ತುಮಕೂರಿನ ಕ್ಯಾತ್ಸಂದದ ರಜತಾದ್ರಿ ನಿವಾಸದಲ್ಲಿ ಕಳೆದ ನವೆಂಬರ್ ತಿಂಗಳಲ್ಲಿ ಕೊಲೆಯತ್ನ ನಡೆದಿದೆ ಎಂದು ದೂರು ಸಲ್ಲಿಸಿದ್ದಾರೆ.
ಗುರುವಾರ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹಾಗೂ ಕಾನೂನು ಮತ್ತು ಸುವ್ಯವಸ್ತೆಯ ಹೆಚ್ಚುವರಿ ಮಹಾನಿರ್ದೇಶಕ ಹಿತೇಂದ್ರ ಅವರನ್ನು ಭೇಟಿಯಾಗಿ ನನ್ನ ಮೇಲೆ ಕೊಲೆಯತ್ನ ನಡೆದಿದೆ ಎಂದು ದೂರು ನೀಡಿದ್ದರು.


