ಚಿತ್ರದುರ್ಗ: ಲಾರಿ- ಟಿಟಿ ವಾಹನದ ನಡುವೆ ಭೀಕರ ಅಪಘಾತ ಅಪಘಾತ ಸಂಭವಿಸಿ ಮೂವರು ಜನರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಶಂಕರಿಬಾಯಿ(65),
Advertisement
ಕುಮಾರ ನಾಯ್ಕ್(46) ಮತ್ತು ಶ್ವೇತಾ(38) ಮೃತ ದುರ್ಧೈವಿಗಳಾಗಿದ್ದು, ಐವರಿಗೆ ಗಂಭೀರ ಗಾಯಗಳಾಗಿದ್ದು, ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಬೆಂಗಳೂರಿನಿಂದ ಚಳ್ಳಕೆರೆ ತಳುಕಿಗೆ ಬರುತ್ತಿದ್ದಾಗ, ಟಿಪ್ಪರ್ ಲಾರಿ ಅಡ್ಡ ಬಂದಿದ್ದು, ತಪ್ಪಿಸಲು ಹೋಗಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.