ತುಮಕೂರು:– ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಚಿಕ್ಕಪಾಲನಹಳ್ಳಿ ಗೇಟ್ ಬಳಿ ನಡೆದಿದೆ.
ಘಟನೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ ಹಾಗೂ ಮಹಿಳೆ ಸಾವನ್ನಪ್ಪಿದ್ದು, ಮೃತರು ಪಾವಗಡ ಮೂಲದವರಾಗಿದ್ದಾರೆ. ಯುಗಾದಿ ಹಬ್ಬಕ್ಕೆಂದು ಬೆಂಗಳೂರಿನಿಂದ ಪಾವಗಡಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.



