ಮೈಸೂರು :- ಜಿಲ್ಲೆ ಟಿ.ನರಸೀಪುರ ತಾಲೂಕಿನ ಮೇದಿನಿ ಗ್ರಾಮದಲ್ಲಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಹುಡುಗರು ನೀರುಪಾಲಾಗಿರುವ ಘಟನೆ ಜರುಗಿದೆ.
Advertisement
17 ವರ್ಷದ ಭರತ್, 18 ವರ್ಷದ ಲಿಖಿತ್ ಮೃತರು. ಇವರು ಕೊಳ್ಳೇಗಾಲ ಪಟ್ಟಣದ ನಿವಾಸಿಗಳು ಎನ್ನಲಾಗಿದೆ. ಮೇದಿನಿ ಗ್ರಾಮದ ರಾಮಕಟ್ಟೆ ಬಳಿ ಈಜಲು ಐವರು ತೆರಳಿದ್ದರು. ಈ ವೇಳೆ ಭರತ್ ಹಾಗೂ ಲಿಖಿತ್ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದು, ಉಳಿದ ಮೂವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ನೀರಿನಲ್ಲಿ ಕೊಚ್ಚಿ ಹೋಗಿರುವ ಭರತ್ ಹಾಗೂ ಲಿಖಿತ್ ಮೃತದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


