ಮೊದಲು ಚೆನ್ನೈ ವಿರುದ್ಧ ಹೀನಾಯವಾಗಿ ಸೋತಿದ್ದ ಹಾರ್ದಿಕ್ ಪಡೆ ಈಗ, ಗುಜರಾತ್ ಟೈಟನ್ಸ್ ವಿರುದ್ಧವು ನೆಲಕಚ್ಚಿದೆ. ಸತತ ಸೋಲಿನಿಂದ ಕಂಗಾಲಾಗಿದೆ. ಇದರ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ ದಂಡದ ಶಾಕ್ ಎದುರಾಗಿದೆ. ಹೌದು ಅಹ್ಮದಾಬದಾದ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬಾಲಿಂಗ್ ಆಯ್ದುಕೊಂಡು ಮುಂಬೈ ತಂಡ ಆರಂಭದಲ್ಲಿಯೇ ಎಡವಿತು.
ಆದ್ದರಿಂದ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ ಪಾಂಡ್ಯಗೆ ಈ ಶಿಕ್ಷೆ ನೀಡಲಾಗಿದ್ದು, 12 ಲಕ್ಷ ರೂ. ದಂಡ ವಿಧಿಸಿ ಈ ತಪ್ಪನ್ನು ಪುನರಾವರ್ತಿಸಿದರೆ ಡಿಮೆರಿಟ್ ಪಾಯಿಂಟ್ ನೀಡುವ ಎಚ್ಚರಿಕೆ ನೀಡಲಾಗಿದೆ.
ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸದ ಹಾರ್ದಿಕ್ ಪಾಂಡ್ಯಗೆ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ, 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದೇ ತಪ್ಪನ್ನು ಮುಂದಿನ ಪಂದ್ಯಗಳಲ್ಲಿ ಪುನರಾವರ್ತಿಸಿದರೆ, ಹಾರ್ದಿಕ್ ಪಾಂಡ್ಯ 24 ಲಕ್ಷ ರೂ. ದಂಡ ಕಟ್ಟಬೇಕಾಗುತ್ತದೆ.
ಇದಕ್ಕೂ ಮುನ್ನ ನಡೆದ ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿರಲಿಲ್ಲ. ಕಳೆದ ಸೀಸನ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ನಿಗದಿತ ಸಮಯದೊಳಗೆ 20 ಓವರ್ಗಳನ್ನು ಪೂರ್ಣಗೊಳಿಸಿದ ಕಾರಣ ನಾಯಕ ಹಾರ್ದಿಕ್ ಪಾಂಡ್ಯಗೆ 30 ಲಕ್ಷ ರೂ. ದಂಡ ಹಾಗೂ ಒಂದು ಪಂದ್ಯದ ನಿಷೇಧ ಹೇರಲಾಗಿತ್ತು.