Rain News: ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್ 2ರಿಂದ ಭಾರೀ ಮಳೆ!

0
Spread the love

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 2 ರಿಂದ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Advertisement

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here