ವಿಜಯಪುರ:- ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಪರಿಣಾಮ 6 ವರ್ಷಗಳ ಕಾಲ ಶಾಸಕ ಯತ್ನಾಳ್ ಅವರನ್ನು ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಇತ್ತೀಚೆಗೆ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.
ಇದೀಗ ಉಚ್ಚಾಟನೆ ಬೆನ್ನಲ್ಲೇ ಯತ್ನಾಳ್ ಅವರು ವಿಜಯಪುರಕ್ಕೆ ಆಗಮಿಸಿ, ಇಲ್ಲಿನ ಪ್ರಸಿದ್ಧ ಸಿದ್ದೇಶ್ವರ ದೇವಸ್ಥಾನದಲ್ಲಿ ಯತ್ನಾಳ್ ಹಾಗೂ ಕುಟುಂಬ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಪತ್ನಿ ಶೈಲಜಾ ಹಾಗೂ ಸಿದ್ದೇಶ್ವರ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಭಾಗಿಯಾಗಿದ್ದಾರೆ.
ಪೂಜೆ ಬಳಿಕ ಮಂಗಳಾರತಿ ಕಾರ್ಯಕ್ರಮ ಮುಗಿಸಿದ್ದಾರೆ. ನಂತರ ಇದೀಗ ಪ್ರತಿ ವರ್ಷ ಯುಗಾದಿ ಪಾಡ್ಯಾದಂದು ನಡೆಸುವ ಹೋಮ ಹವನ ಪೂಜೆ ಕಾರ್ಯಗಳಲ್ಲಿ ಭಾಗಿ ಆಗಿದ್ದಾರೆ.



